ಕೇಂದ್ರ ಬಜೆಟ್‌ನಿಂದ ನವ ಭಾರತ ನಿರ್ಮಾಣ: ಬಿಜೆಪಿ

ಗುರುವಾರ, 30 ಜನವರಿ 2020 (15:25 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನವ ಭಾರತ ನಿರ್ಮಾಣದ ಆಶಯಕ್ಕೆ ಪೂರಕವಾದ ಐತಿಹಾಸಿಕ ಬಜೆಟ್ ಮಂಡನೆಯಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಬಗ್ಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗತೊಡಗಿವೆ.
 
ಪಾಶ್ಚಾತ್ಯ ಸಂಸ್ಕೃತಿಯ ಸೂಟ್ಕೇಸ್ ಬದಿಗಿರಿಸಿ ಭಾರತೀಯತೆಯಂತೆ ಕೆಂಪು ವಸ್ತ್ರದಲ್ಲಿ ಬಜೆಟ್ ಪ್ರತಿಗಳ ಕಟ್ಟನ್ನು ತರುವ ಮೂಲಕ ನರೇಂದ್ರ ಮೋದಿ ನೇತೃತ್ವದ ಸರಕಾರವು ನಮ್ಮ ಪರಂಪರೆ ಉಳಿಸುವತ್ತ ಹೆಜ್ಜೆಯಿರಿಸುತ್ತಿದೆ. ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ 30 ಸಾವಿರ ಕಿ.ಮೀ. ರಸ್ತೆ ನಿರ್ಮಾಣ ಪರಿಸರ ಸ್ನೇಹಿ ಯೋಜನೆಯಾಗಿದೆ.
 
ರೈಲ್ವೆ ನಿಲ್ದಾಣಗಳ ಆಧುನೀಕರಣ, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತರಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿ, ಪ್ರವಾಸಿ ಕೇಂದ್ರಗಳನ್ನು ವಿಶ್ವದರ್ಜೆಗೆ ಏರಿಸಲು ನಿರ್ಧಾರ, ವಿದ್ಯುತ್ ಕೊರತೆ ನಿವಾರಿಸಲು ಒನ್ ನೇಶನ್ ಒನ್ ಗ್ರಿಡ್ ಮುಂತಾದ ಯೋಜನೆಗಳ ಮೂಲಕ ದೇಶದ ಸರ್ವಾಂಗೀಣ ಪ್ರಗತಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ