ಹಲಸಿನ ತೊಳೆ ರೊಟ್ಟಿ

ಬೇಕಾಗುವ ಸಾಮಾಗ್ರಿಗಳು:

ಉಪ್ಪಿನಲ್ಲಿ ಹಾಕಿಟ್ಟ ಹಲಸಿನಕಾಯಿ ತೊಳೆ: 1 ಕಪ್
ಅಕ್ಕಿ - ಒಂದೂವರೆ ಕಪ್
ತೆಂಗಿನಕಾಯಿ - ಅರ್ಧ ಕಪ್
ಕೊತ್ತಂಬರಿ ಸೊಪ್ಪು - ಸ್ವಲ್ಪ
ಈರುಳ್ಳಿ - 1
ಹಸಿಮೆಣಸಿನಕಾಯಿ - 2

ಪಾಕ ವಿಧಾನ:

ಉಪ್ಪಿನಲ್ಲಿ ಹಾಕಿಟ್ಟ ಹಲಸಿನ ತೊಳೆಗಳನ್ನು ತೆಗೆದು ನೀರಿನಲ್ಲಿ ಚೆನ್ನಾಗಿ ತೊಳೆದು ರುಬ್ಬಿಟ್ಟುಕೊಳ್ಳಿ. ನೆನೆಸಿದ ಅಕ್ಕಿಗೆ ತೆಂಗಿನಕಾಯಿ, ಹಸಿಮೆಣಸಿನಕಾಯಿ ಹಾಕಿ ರುಬ್ಬಿಕೊಳ್ಳಿ. ನೀರುಳ್ಳಿ ಮತ್ತು ಕೊತ್ತಂಬರಿ ಸೊಪ್ಪನ್ನು ಸಣ್ಣದಾಗಿ ಹೆಚ್ಚಿ ಇಟ್ಟುಕೊಳ್ಳಿ. ನಂತರ ಎಲ್ಲವನ್ನೂ ಕಲಸಿ, ಹಿಟ್ಟನ್ನು ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಿಕೊಂಡು ಬಾಳೆ ಎಲೆ ಅಥವಾ ಪ್ಲಾಸ್ಟಿಕ್ ಮೇಲೆ ರೊಟ್ಟಿಯಾಕಾರದಲ್ಲಿ ತಟ್ಟಿ, ಬೆಣ್ಣೆ ಅಥವಾ ತುಪ್ಪ ಹಾಕಿ ಬೇಯಿಸಿಕೊಳ್ಳಿ.

ವೆಬ್ದುನಿಯಾವನ್ನು ಓದಿ