ಮಹಿಳೆಯರಿಗೆ ಮೆಟ್ರೋದಲ್ಲಿ ಉಚಿತ ಪ್ರಯಾಣ

ಮಂಗಳವಾರ, 8 ಮಾರ್ಚ್ 2022 (13:03 IST)
ತಿರುವನಂತಪುರಂ : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕೇರಳದ ಕೊಚ್ಚಿ ಮೆಟ್ರೋ ರೈಲಿನಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಮೆಟ್ರೋದಲ್ಲಿ ಪಯಾಣಿಸಲು ಅನುಮತಿ ನೀಡಲಾಗಿದೆ.

ಈ ಕುರಿತಂತೆ ಕೊಚ್ಚಿ ಮೆಟ್ರೋ ರೈಲ್ವೇ(ಕೆಎಂಆರ್ಎಲ್), ಮಾರ್ಚ್ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ಮಹಿಳೆಯರು ಕೊಚ್ಚಿ ಮೆಟ್ರೋದಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ನಿಲ್ದಾಣಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದೆ. ಇಷ್ಟಲ್ಲದೇ ಈ ವಿಶೇಷ ದಿನದಂದು 10 ಪ್ರಮುಖ ನಿಲ್ದಾಣಗಳಲ್ಲಿ ಮಹಿಳಾ ಸಿಬ್ಬಂದಿ ನಿಲ್ದಾಣ ನಿಯಂತ್ರಕರಾಗಿರುತ್ತಾರೆ ತಿಳಿಸಿದೆ. 

ಕೊಚ್ಚಿ ಮೆಟ್ರೋ ಟ್ವೀಟ್ನಲ್ಲಿ, ಮಾರ್ಚ್ 8, ಅಂತರಾಷ್ಟ್ರೀಯ ಮಹಿಳಾ ದಿನದಂದು, ಮಹಿಳೆಯರು ಕೊಚ್ಚಿ ಮೆಟ್ರೋದಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಸ್ಟೇಷನ್ಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದಿದೆ. 

ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಮೊದಲಿಗೆ ಆಸ್ಟ್ರಿಯಾ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಟ್ಜರ್ಲೆಂಡ್ನಲ್ಲಿ 1975ರಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲು ಆರಂಭಿಸಲಾಯಿತು.

ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕøತಿಕ, ಐತಿಹಾಸಿಕ ಮತ್ತು ರಾಜಕೀಯ ಸಾಧನೆಗಳಿಗೆ ಒತ್ತು ನೀಡುವ ಉದ್ದೇಶದಿಂದ. ಮತ್ತು 1977 ರಲ್ಲಿ ವಿಶ್ವಸಂಸ್ಥೆಯು ಮಾರ್ಚ್ 8 ಅನ್ನು ಅಂತರರಾಷ್ಟ್ರೀಯ ಮಹಿಳಾ ದಿನ ಎಂದು ಘೋಷಿಸಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ