ಇಂದು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಸೋಮವಾರ, 1 ಫೆಬ್ರವರಿ 2021 (08:26 IST)
ನವದೆಹಲಿ : ಇಂದು 2021-22ನೇ ಸಾಲಿನ ಕೇಂದ್ರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾಗಲಿದೆ.
ಇಂದು ಲೋಕಸಭೆಯಲ್ಲಿ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಸಚಿವೆ ನಿರ್ಮಲಾ ಸೀತಾರಾಮನ್ ಅವರು 3ನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದೆ.
ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ವಿತ್ತ ಸಚಿವೆ, 2019, 2020ರಲ್ಲೂ ಬಜೆಟ್ ಮಂಡಿಸಿದ್ದರು. ಇದು ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರದ 9ನೇ ಬಜೆಟ್ ಆಗಿದೆ.