ಲೋಕಸಭೆ ಚುನಾವಣೆಯಲ್ಲಿ ಯುಪಿಎ ಬಹುತಗಳಿಸಿ ಅಧಿಕಾರಕ್ಕೆ ಬರಲಿದೆ: ಸೋನಿಯಾ

ಬುಧವಾರ, 26 ಮಾರ್ಚ್ 2014 (16:26 IST)
PTI
ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ವಿರುದ್ಧವಾಗಿದ್ದರೂ ಯುಪಿಎ ಮೈತ್ರಿಕೂಟ ಕೇಂದ್ರದಲ್ಲಿ ಸರಕಾರ ರಚಿಸುವಷ್ಟು ಬಹುಮತಗಳಿಸುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಹಿಂದಿನ ಹಲವಾರು ಚುನಾವಣೆಗಳಲ್ಲಿ ಚುನಾವಣಾ ಪೂರ್ವ ಸಮೀಕ್ಷೆಗಳು ತಪ್ಪು ಎನ್ನುವುದು ಸಾಬೀತಾಗಿದೆ. ಈ ಬಾರಿ ಕೂಡಾ ಚುನಾವಣೆ ಪೂರ್ವ ಸಮೀಕ್ಷೆ ತಪ್ಪಾಗಲಿವೆ ಎಂದರು.

ಕಳೆದ 2004ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಥೆ ಅಂತ್ಯವಾದಂತೆ ಎಂದು ವಿಪಕ್ಷಗಳು ಆರೋಪಿಸಿದ್ದವು. ಆದರೆ, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರದ ಗದ್ದುಗೆಯನ್ನು ಅಲಂಕರಿಸಿತ್ತು ಎಂದು ವಿಪಕ್ಷಗಳನ್ನು ಲೇವಡಿ ಮಾಡಿದರು.

ಅದರಂತೆ, 2009ರಲ್ಲಿ ಕೂಡಾ ಕಾಂಗ್ರೆಸ್ ಪಕ್ಷ ಎರಡಂಕಿ ಸೀಟುಗಳನ್ನು ಗೆಲ್ಲುವುದಿಲ್ಲ. ಅಧಿಕಾರವನ್ನು ಕಳೆದುಕೊಳ್ಳುವುದು ಖಚಿತ ಎಂದು ವಿಪಕ್ಷಗಳು ಭಾರಿ ಪ್ರಚಾರ ನಡೆಸಿದ್ದವು. ಆದರೆ, ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಿತು.

ಆದ್ದರಿಂದ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಚುನಾವಣಾ ಹೋರಾಟಕ್ಕೂ ಸಿದ್ದವಾಗಿದ್ದು, ಖಂಡಿತವಾಗಿ ಬಹುಮತಗಳಿಸಿ ಕೇಂದ್ರದಲ್ಲಿ ಸರಕಾರ ರಚಿಸುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ