ಗಣಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ : ಸಚಿವ ಆನಂದ ಸಿಂಗ್ ಹೇಳಿದ್ದೇನು

ಬುಧವಾರ, 8 ಜುಲೈ 2020 (17:52 IST)
ರಾಜಧಾನಿ ಬೆಂಗಳೂರು ಹೊರತುಪಡಿಸಿದರೆ ಕೊರೊನಾ ಕೇಸ್ ಹೆಚ್ಚಾಗುತ್ತಿರುವುದು ಹಾಗೂ ಸಾವು ನೋವು ಕಂಡುಬರುತ್ತಿರೋದು ಗಣಿನಾಡಿನಲ್ಲಿ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಬಳ್ಳಾರಿ ಜಿಲ್ಲೆಯಲ್ಲಿ 1867 ಹಾಸಿಗೆಗಳ ಸಿದ್ಧತೆ ಮಾಡಿದೆ. ಸೋಂಕಿನ ನಿಯಂತ್ರಣ ಕಾರ್ಯಕ್ರಮಗಳು, ಸೋಂಕಿತರಿಗೆ ಚಿಕಿತ್ಸೆ ನೀಡಲು ಹಣಕಾಸಿನ ಕೊರತೆ ಇಲ್ಲ. ಜಿಲ್ಲಾ ಖನಿಜ ನಿಧಿಯಡಿ ಹಣ ಬಳಕೆ ಮಾಡಲು ಜಿಲ್ಲಾಡಳಿತಕ್ಕೆ ಸೂಚಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಬೆಂಗಳೂರು ಬಿಟ್ಟರೆ ಅತೀ ಹೆಚ್ಚು ಸಾವು ಮತ್ತು ಸೋಂಕು ಜಿಲ್ಲೆಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಬಳ್ಳಾರಿ ನಗರದ ಜಿಲ್ಲಾಸ್ಪತ್ರೆ, ದಂತ ಕಾಲೇಜ್, ಮುರಾರ್ಜಿ ದೇಸಾಯಿ ವಸತಿ ಶಾಲೆ, ಹರಪನಹಳ್ಳಿ ತಾಲೂಕಿನ ಮಾಜಿ ಹಳ್ಳಿ, ಹೊಸಪೇಟೆಯ ಶಂಭುನಾಥಗುಡ್ಡ, ಸಂಡೂರಿನ ಬಂಡ್ರಿ, ಹಗರಿಬೊಮ್ಮನಹಳ್ಳಿ, ಹಡಗಲಿಯ ಮುರಾರ್ಜಿ ದೇಸಾಯಿ ವಸತಿ ಶಾಲೆ, ಸಿರುಗುಪ್ಪಾದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಬೆಡ್ ವ್ಯವಸ್ಥೆ ಮಾಡಿದೆ ಎಂದಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ