ಮತದಾರರ ಅಂತಿಮ ಪಟ್ಟಿ ಬಿಡುಗಡೆ

ಕ್ಷೇತ್ರ ಪುನರ್ವಿಂಗಡಣೆಯ ಅನ್ವಯದಂತೆ ಮತದಾರರ ಅಂತಿಮ ಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟು ನಾಲ್ಕು ಕೋಟಿ ಮತದಾರರಿದ್ದು, 2.3ಕೋಟಿ ಪುರುಷರು ಹಾಗೂ 1.97 ಮಹಿಳಾ ಮತದಾರರಿದ್ದಾರೆ. ಈ ಪಟ್ಟಿಯನ್ನು ರಾಜ್ಯದ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿಯೂ ಭಾನುವಾರದಂದು ಪ್ರಕಟಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಆರ್. ರಾಮಶೇಷನ್ ತಿಳಿಸಿದ್ದಾರೆ.

ಮತದಾರರ ಅಂತಿಮ ಪಟ್ಟಿ ಬಿಡುಗಡೆ ಹಿನ್ನೆಲೆಯಲ್ಲಿ ಚುನಾವಣೆ ದಿನಾಂಕವನ್ನು ಪ್ರಕಟಿಸಲು ಕ್ಷಣಗಣಗೆ ಆರಂಭವಾಗಿದೆ. ರಾಜ್ಯದಲ್ಲಿ ಮೇ ತಿಂಗಳಿನಲ್ಲಿ ಚುನಾವಣೆ ನಡೆಸಬೇಕಿರುವುದರಿಂದ ತ್ವರಿತಗತಿಯಲ್ಲಿ ಚುನಾವಣಾ ಆಯೋಗವು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದ್ದು, ದೇಶದಲ್ಲಿಯೇ ಕರ್ನಾಟಕ ಕ್ಷೇತ್ರ ಪುನರ್ ವಿಂಗಡಣೆ ಆಧಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡ ಮೊದಲ ರಾಜ್ಯವಾಗಿದೆ.

ಅಂತಿಮ ಪಟ್ಟಿ ಪ್ರಕಟಗೊಂಡಿರುವುದರಿಂದ ಶೀಘ್ರದಲ್ಲಿಯೇ ಚುನಾವಣಾ ದಿನಾಂಕ ಪ್ರಕಟಿಸುವ ಸಾಧ್ಯತೆಗಳಿರುವುದರಿಂದ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಪ್ರಾರಂಭಗೊಂಡಿದೆ. ಇದೀಗ ರಾಜಕೀಯ ಪಕ್ಷಗಳು ಮತದಾರರನ್ನು ಒಲೈಸುವತ್ತ ದೃಷ್ಟಿ ನೆಟ್ಟಿದೆ.

ವೆಬ್ದುನಿಯಾವನ್ನು ಓದಿ