ಭ್ರಷ್ಟಚಾರಿ ಸಚಿವರನ್ನು ಶಿಕ್ಷೆಗೆ ಗುರಿಪಡಿಸುವುದು ನನ್ನ ಕೆಲಸವಲ್ಲ: ರಾಹುಲ್ ಗಾಂಧಿ

ಮಂಗಳವಾರ, 28 ಜನವರಿ 2014 (13:39 IST)
PTI
ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವ ಸಚಿವರ ವಿರುದ್ಧ ಪ್ರಕರಣಗಳನ್ನು ದಾಖಲಾಗಿದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸುವುದು ನನ್ನ ಕೆಲಸವಲ್ಲ ಎಂದು ಕಾಂಗ್ರೆಸ್ ಉಪಾಧ್ಕ್ಷಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ವಿರುದ್ಧ ಭ್ರಷ್ಟಾಚಾರ ಪ್ರಕರಣ ಯಾಕೆ ದಾಖಲಾಗಿಲ್ಲ ಎಂದು ಸುದ್ದಿಗಾರರು ಕೇಳಿದೆ ಪ್ರಶ್ನೆಗೆ ಉತ್ತರಿಸಿದ ಅವರು, ಭ್ರಷ್ಟಾಚಾರಿಗಳ ವಿರುದ್ಧ ಪ್ರಕರಣ ದಾಖಲಿಸುವುದು ನನ್ನ ವೃತ್ತಿಯಲ್ಲ. ಆದರೆ, ಯಾವುದೇ ರಾಜಕಾರಣಿ ಭ್ರಷ್ಟಾಚಾರದಲ್ಲಿ ಭಾಗಿಯಾದಾಗ ಅಂತಹ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎನ್ನುವುದೇ ನನ್ನ ನಿಲುವು ಎಂದು ಹೇಳಿದ್ದಾರೆ.

ಭ್ರಷ್ಟಾಚಾರಿಗಳು ಯಾವುದೇ ಪಕ್ಷಕ್ಕೆ ಸೇರಿದವರಾಗಿರಲಿ ಅಂತಹ ರಾಜಕಾರಣಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ನಾನು ನ್ಯಾಯಮೂರ್ತಿಯಲ್ಲ. ಕಾನೂನಿನ ಪ್ರಕಾರ ಅವರನ್ನು ಶಿಕ್ಷೆಗೊಳಪಡಿಸಬೇಕು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ