ಮಗಳ ಆರೋಗ್ಯದ ಬಗ್ಗೆ ಚಿಂತಿಸಿದ ತಂದೆತಾಯಿ ಹೀಗಾ ಮಾಡೋದು?

ಭಾನುವಾರ, 22 ನವೆಂಬರ್ 2020 (07:51 IST)
ವಯನಾಡು : ಮಗಳ ಆರೋಗ್ಯದ ಚಿಂತೆಗೊಳಗಾದ 80 ವರ್ಷದ ತಂದೆ ಹಾಗೂ 76 ವರ್ಷದ ತಾಯಿ  ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ವಯನಾಢ್ ಜಿಲ್ಲೆಯಲ್ಲಿ ನಡೆದಿದೆ.

ಮೃತ ದಂಪತಿಗೆ ಮೂವರು ಹೆಣ್ಣ ಮಕ್ಕಳಿದ್ದು, ಇಬ್ಬರಿಗೆ ಮದುವೆಯಾಗಿತ್ತು. ಆದರೆ ಕಿರಿಯ ಮಗಳು ಅವಿವಾಹಿತಳಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಳು. ಇದರಿಂದ ನೊಂದ ತಂದೆತಾಯಿ ಇಬ್ಬರು ಮನೆಯಲ್ಲಿ  ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ನೋಡಿದ ನೆರೆಹೊರೆಯವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಅವರನ್ನು ಉಳಿಸಿಕೊಳ್ಳಲಾಗಲಿಲ್ಲ ಎನ್ನಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಇದು ಆತ್ಮಹತ್ಯೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ