2ಜಿ: ಸಚಿವರೊಂದಿಗೆ ಪ್ರಧಾನಿ ಮನಮೋಹನ್ ಸಿಂಗ್ ಚರ್ಚೆ

ಶನಿವಾರ, 11 ಫೆಬ್ರವರಿ 2012 (13:43 IST)
2ಜಿ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಕೇಂದ್ರ ಸಚಿವರಾದ ಕಪಿಲ್ ಸಿಬಲ್, ಸಲ್ಮಾನ್ ಖುರ್ಷಿದ್, ಪ್ರಣಬ್ ಮುಖರ್ಜಿ ಮತ್ತು ಪಿ.ಚಿದಂಬರಂ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಿಗ್ಗೆ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಪ್ರಧಾನಿ ನಿವಾಸಕ್ಕೆ ತೆರಳಿದ ಸಚಿವರು 2ಜಿ ತರಂಗಾಂತರ ಹರಾಜಿಗೆ ಅಗತ್ಯವಾಗಿರುವ ನಿಯಮಗಳು ಮತ್ತು ಮಾರ್ಗದರ್ಶಿ ಸೂತ್ರಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಪ್ರಧಾನಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 2008ರ ಎನ್‌ಡಿಎ ಸರಕಾರದ ಅವಧಿಯಲ್ಲಿ ನೀಡಲಾಗಿರುವ ಟೆಲಿಕಾಂ ಲೈಸೆನ್ಸ್‌ಗಳನ್ನು ರದ್ದುಗೊಳಿಸಿ, ಹೊಸ ಕಾನೂನು ಜಾರಿಗೆ ತರಬೇಕೆ ಅಥವಾ ಅದನ್ನೇ ಮುಂದುವರಿಸಬೇಕೇ ಎನ್ನುವ ಬಗ್ಗೆ ಕೇಂದ್ರ ಸಚಿವರು ನಿರ್ಧರಿಸಲಿದ್ದಾರೆ ಎನ್ನಲಾಗಿದೆ.

ಪ್ರಸಕ್ತ ತಿಂಗಳ ಆರಂಭದಲ್ಲಿ ಸುಪ್ರೀಂಕೋರ್ಟ್ ರದ್ದುಗೊಳಿಸಿರುವ 122 2ಜಿ ಲೈಸೆನ್ಸ್‌ಗಳ ಬಗ್ಗೆ ಚರ್ಚೆಯಾಗಲಿದೆ ಕೇಂದ್ರ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ