ರೆಪೋ ಕಡಿತ: ನಾಗಾಲೋಟದತ್ತ ಶೇರುಪೇಟೆ ಸೂಚ್ಯಂಕ

ಬುಧವಾರ, 4 ಏಪ್ರಿಲ್ 2012 (17:29 IST)
PTI
ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳನ್ನು ಕಡಿತ ಮಾಡುವ ನಿರೀಕ್ಷೆಗಳಿಂದಾಗಿ ಬ್ಲ್ಯೂಚಿಪ್ ನೇತೃತ್ವದ ಹಣಕಾಸು ಸಂಸ್ಥೆಗಳ ಶೇರುಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ ಶೇರುಪೇಟೆಯ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 119 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಕಳೆದ ಎರಡು ದಿನಗಳ ವಹಿವಾಟಿನಲ್ಲಿ 420 ಪಾಯಿಂಟ್‌ಗಳ ಏರಿಕೆ ಕಂಡ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 119.27 ಪಾಯಿಂಟ್‌ಗಳ ಏರಿಕೆ ಕಂಡು 17,664.10 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 40.60 ಪಾಯಿಂಟ್‌ಗಳ ಏರಿಕೆ ಕಂಡು 5,358.50 ಅಂಕಗಳಿಗೆ ತಲುಪಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರಗಳನ್ನು ಕಡಿತ ಮಾಡುವ ನಿರೀಕ್ಷೆಗಳಿಂದಾಗಿ ಬ್ಲ್ಯೂಚಿಪ್ ನೇತೃತ್ವದ ಹಣಕಾಸು ಸಂಸ್ಥೆಗಳ ಶೇರುಖರೀದಿಯಲ್ಲಿ ಹೆಚ್ಚಳವಾಗಿದ್ದರಿಂದ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಬಿಎಚ್‌ಇಎಲ್, ಎಸ್‌ಬಿಐ, ಎಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಚ್‌ಡಿಎಎಫ್‌ಸಿ ಬ್ಯಾಂಕ್ ಶೇರುಗಳು ವಹಿವಾಟಿನ ಮುಕ್ತಾಯಕ್ಕೆ ಚೇತರಿಕೆ ಕಂಡಿವೆ.

ವೆಬ್ದುನಿಯಾವನ್ನು ಓದಿ