ತೊಳಲಾಟದ ವಹಿವಾಟಿನ ಮಧ್ಯೆ ಸೂಚ್ಯಂಕ ಚೇತರಿಕೆ

ಶುಕ್ರವಾರ, 13 ಏಪ್ರಿಲ್ 2012 (10:21 IST)
PTI
ಜಾಗತಿಕ ಮಾರುಕಟ್ಟೆಗಳ ಸ್ಥಿರವಹಿವಾಟಿನಿಂದಾಗಿ ರೆಪೋ ದರ ಕಡಿತವಾಗುವ ನಿರೀಕ್ಷೆಯಲ್ಲಿರುವ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ 52 ಪಾಯಿಂಟ್‌ಗಳ ಚೇತರಿಕೆ ಕಂಡಿದೆ

ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 133.22 ಪಾಯಿಂಟ್‌ಗಳ ಏರಿಕೆ ಕಂಡ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 52.45 ಪಾಯಿಂಟ್‌ಗಳ ಏರಿಕೆ ಕಂಡು 17,385.07 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 21.10 ಪಾಯಿಂಟ್‌ಗಳ ಏರಿಕೆ ಕಂಡು 5,297.95 ಅಂಕಗಳಿಗೆ ತಲುಪಿದೆ.

ಜಾಗತಿಕ ಮಾರುಕಟ್ಟೆಗಳ ಸ್ಥಿರವಹಿವಾಟಿನಿಂದಾಗಿ ರೆಪೋ ದರ ಕಡಿತವಾಗುವ ನಿರೀಕ್ಷೆಯಲ್ಲಿರುವ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.53ರಷ್ಟು ಏರಿಕೆ ಕಂಡಿದೆ. ಜಪಾನ್‌ನ ನಿಕೈ ಸೂಚ್ಯಂಕ ಕೂಡಾ ಶೇ.1.40 ಪಾಯಿಂಟ್‌ಗಳ ಏರಿಕೆ ಕಂಡಿದೆ.

ವೆಬ್ದುನಿಯಾವನ್ನು ಓದಿ