ಸೆನ್ಸೆಕ್ಸ್: ಭರ್ಜರಿ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಬುಧವಾರ, 9 ಏಪ್ರಿಲ್ 2014 (13:28 IST)
PTI
ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 103 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.

ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 208.05 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 103.13 ಪಾಯಿಂಟ್‌ಗಳ ಚೇತರಿಕೆ ಕಂಡು 22,446.58 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 35.40 ಪಾಯಿಂಟ್‌ಗಳ ಏರಿಕೆ ಕಂಡು 6730.45 ಅಂಕಗಳಿಗೆ ತಲುಪಿದೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.11 ರಷ್ಟು ಏರಿಕೆಯಾಗಿದೆ. ಆದರೆ, ಜಪಾನ್‌ನ ನಿಕೈ ಮಾರುಕಟ್ಟೆ ಸೂಚ್ಯಂಕ ಶೇ.1.82 ರಷ್ಟು ಇಳಿಕೆಯಾಗಿದೆ.

ವೆಬ್ದುನಿಯಾವನ್ನು ಓದಿ