ಸೆನ್ಸೆಕ್ಸ್,: ಭಾರಿ ಕುಸಿತ ಕಂಡ ಸಂವೇದಿ ಸೂಚ್ಯಂಕ

ಶುಕ್ರವಾರ, 11 ಏಪ್ರಿಲ್ 2014 (13:43 IST)
PTI
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಭಾರಿ ಕುಸಿತ ಕಂಡಿದೆ.

ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 150 ಪಾಯಿಂಟ್‌ಗಳ ಕುಸಿತ ಕಂಡು 22,567 ಅಂಕಗಳಿಗೆ ತಲುಪಿದೆ. ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 41 ಪಾಯಿಂಟ್‌ಗಳ ಕುಸಿತ ಕಂಡು 6756 ಅಂಕಗಳಿಗೆ ತಲುಪಿದೆ.

ಹೂಡಿಕೆದಾರರು ಲಾಭದಾಯಕ ವಹಿವಾಟಿಗೆ ಮೊರೆಹೋಗಿದ್ದರಿಂದ ಶೇರುಪೇಟೆಯ ಸೂಚ್ಯಂಕ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಭಾರತೀಯ ರಿಸರ್ವ್ ಬ್ಯಾಂಕ್ ಸಾಲದ ಮೇಲಿನ ಬಡ್ಡಿ ದರ ನಬತನ ನೀತಿಗಳನ್ನು ಜಾರಿಗೆ ತರುವುದಾಗಿ ಹೇಳಿಕೆ ನೀಡಿದ ನಂತರ ಹೂಡಿಕೆದಾರರು ಕಾದು ನೋಡುವ ತಂತ್ರಕ್ಕೆ ಶರಣಾಗಿದ್ದಾರೆ ಎಂದು ಶೇರುಪೇಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ