ಯುರೇನಿಯಂ: ಬಾಲಿಯಲ್ಲಿ ಮನಮೋಹನ್‌, ಗಿಲ್ಲಾರ್ಡ್‌ ಚರ್ಚೆ

ಶನಿವಾರ, 19 ನವೆಂಬರ್ 2011 (15:49 IST)
ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಆಸಿಯಾನ್‌ ಶೃಂಗ ಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮನಮೋಹನ ಸಿಂಗ್‌ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಪ್ರಧಾನಿ ಜ್ಯೂಲಿಯಾ ಗಿಲ್ಲಾರ್ಡ್‌ ಅವರು ಭಾರತಕ್ಕೆ ಯುರೇನಿಯಂ ರಫ್ತು ಮಾಡಲು ಇರುವ ನಿರ್ಬಂಧವನ್ನು ತೆಗೆದು ಹಾಕಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಪ್ರಧಾನಿ ಸಿಂಗ್‌ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗಿಲ್ಲಾರ್ಡ್‌, ಡಿಸೆಂಬರ್‌ನಲ್ಲಿ ನಡೆಯಲಿರುವ ಲೇಬರ್‌ ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಭಾರತಕ್ಕೆ ಯುರೇನಿಯಂ ರಫ್ತು ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ತಾವು ಒತ್ತಾಯಿಸುವುದಾಗಿ ಹೇಳಿದರು.

ಭಾರತಕ್ಕೆ ಯುರೇನಿಯಂ ರಫ್ತು ಮಾಡುವುದರಿಂದ ಆಸ್ಟ್ರೇಲಿಯಾದ ಆರ್ಥಿಕಾಭಿವೃದ್ಧಿಗೂ ಸಹಕಾರಿಯಾಗುತ್ತದೆ. ಆಸ್ಟ್ರೇಲಿಯಾ ಯುರೇನಿಯಂ ರಫ್ತು ಮಾಡುವ ಜಗತ್ತಿನ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಯುರೇನಿಯಂ ರಫ್ತಿನಿಂದ 75 ಕೋಟಿ ಡಾಲರ್‌ ವಹಿವಾಟು ನಡೆಸಿದ್ದು, ಇದರಿಂದಾಗಿ 4200 ಉದ್ಯೋಗ ಸೃಷ್ಟಿಯಾಗಿದೆ ಎಂದು ಗಿಲ್ಲಾರ್ಡ್‌ ತಿಳಿಸಿದರು.

ವೆಬ್ದುನಿಯಾವನ್ನು ಓದಿ