ಲೋಕಪಾಲ ವರದಿ ರಾಜಕೀಯ ವಂಚನೆ: ಹಜಾರೆ ಕಿಡಿ

ಭಾನುವಾರ, 11 ಡಿಸೆಂಬರ್ 2011 (08:58 IST)
WD
ಸಂಸತ್ತಿನಲ್ಲಿ ಮಂಡಿಸಲಾದ ಲೋಕಪಾಲ ಮಸೂದೆ ರಾಜಕೀಯ ವಂಚನೆಯಾಗಿದೆ ಎಂದು ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಕೇಂದ್ರ ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಸಂಸದೀಯ ಸ್ಥಾಯಿ ಸಮಿತಿ ಅಧ್ಯಕ್ಷ ಅಭಿಷೇಕ್ ಮನು ಸಿಂಘ್ವಿ ಸಿದ್ಧಪಡಿಸಿದ ಲೋಕಪಾಲ ವರದಿ ಕೇವಲ ಕಾಟಾಚಾರಕ್ಕೆ ಸಿದ್ಧಪಡಿಸಲಾಗಿದೆ. ಕೇಂದ್ರ ಸರಕಾರ ದೇಶದ ಜನತೆಯನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರಿ ಲೋಕಪಾಲ ಮಸೂದೆಯಲ್ಲಿ ಲೋಕಪಾಲ ಸಂಸ್ಥೆಯ ತನಿಖಾ ಅಧಿಕಾರವನ್ನು ಕಿತ್ತುಕೊಂಡು ಕ್ಲರ್ಕ್ ಮಟ್ಟಕ್ಕೆ ಸೀಮಿತಗೊಳಿಸಲಾಗಿದೆ. ಇಂತಹ ಮಸೂದೆಯಿಂದ ಏನು ಪ್ರಯೋಜನ. ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ ಸರಕಾರ ಗಂಭೀರವಾಗಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೋಕಪಾಲ ಮಸೂದೆ ದುರ್ಬಲಗೊಳಿಸುವಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿಯವರ ಕೈವಾಡವಿರಬಹುದು. ರಾಹುಲ್ ಆದೇಶದಿಂದಲೇ ಮಸೂದೆಯನ್ನು ದುರ್ಬಲಗೊಳಿಸಲಾಗಿದೆ ಎಂದು ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಸಂಶಯ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ