ಅಣ್ಣಾ ಹಜಾರೆ ರಾಜಕೀಯ ಪ್ರವೇಶಿಸಲಿ: ಇಮ್ರಾನ್ ಖಾನ್

ಮಂಗಳವಾರ, 31 ಜನವರಿ 2012 (16:15 IST)
PTI
ಭ್ರಷ್ಟಾಚಾರ ವಿರೋಧಿ ಹೋರಾಟದ ರೂವಾರಿ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ರಾಜಕೀಯ ಪ್ರವೇಶಿಸಿದಲ್ಲಿ, ಭ್ರಷ್ಟಾಚಾರ ನಿಯಂತ್ರಿಸಲು ಹೆಚ್ಚು ಸಹಕಾರಿಯಾಗುತ್ತದೆ ಎಂದು ಪಾಕಿಸ್ತಾನದ ರಾಜಕಾರಣಿ ಇಮ್ರಾನ್ ಖಾನ್ ಹೇಳಿದ್ದಾರೆ.

ಒಂದು ವೇಳೆ ಅಣ್ಣಾ ಹಜಾರೆ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸಿ ಅಧಿಕಾರದ ಚುಕ್ಕಾಣಿ ಹಿಡಿದಲ್ಲಿ ಭ್ರಷ್ಟಾಚಾರವನ್ನು ಪ್ರಭಾವಿಯಾಗಿ ನಿಯಂತ್ರಿಸಬಹುದು ಎಂದು ಖಾನ್ ಅಭಿಪ್ರಾಯಪಟ್ಟಿದ್ದಾರೆ.

ನಿಮ್ಮ ಹಿಂದೆ ಲಕ್ಷಾಂತರ ಜನತೆಯ ಬೆಂಬಲವಿರಬಹುದು. ಆದರೆ, ಕೇಂದ್ರ ಸರಕಾರಕ್ಕೆ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಆಸಕ್ತಿಯಿರದಿದ್ದಲ್ಲಿ, ನಿಮ್ಮ ಹೋರಾಟಕ್ಕೆ ಅರ್ಥವಿರುವುದಿಲ್ಲ. ಒಂದು ವೇಳೆ ಅಧಿಕಾರದಲ್ಲಿದ್ದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬಹುದು ಎಂದು ತಿಳಿಸಿದ್ದಾರೆ.

ಪಾಕಿಸ್ತಾನದ ಉದಾಹರಣೆಯನ್ನು ನೀಡಿದ ಇಮ್ರಾನ್ ಖಾನ್, ಸುಪ್ರೀಂಕೋರ್ಟ್ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಆದರೆ, ಸರಕಾರ, ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದೆ ಎಂದು ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಇಮ್ರಾನ್ ಖಾನ್ ವಿಷಾದಿಸಿದರು.

ವೆಬ್ದುನಿಯಾವನ್ನು ಓದಿ