ಕಟ್ಟು ಕಥೆಗಳ ಮೇಲೆ ತನಿಖೆಗೆ ಆದೇಶ: ದೇವೇಗೌಡ

ಗುರುವಾರ, 27 ಅಕ್ಟೋಬರ್ 2011 (14:07 IST)
PR
ಕೃಷ್ಣ ಮೇಲ್ದಂಡೆ ತುಂಡು ಗುತ್ತಿಗೆ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ದೇವೇಗೌಡ, ಕಟ್ಟು ಕಥೆಗಳ ಮೇಲೆ ತನಿಖೆಗೆ ಆದೇಶಿಸಲಾಗಿದ್ದು, ಆರೋಪ ಮುಕ್ತನಾಗಿ ಹೊರಬರುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಬದಲಗಿೆ ಕಠಿಣ ಪರಿಶ್ರಮದಿಂದ ಹಗಲಿರಳು ಎನ್ನದೆ ದುಡಿದು ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.

ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ನಿನ್ನೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸಿಐಡಿ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ಧಾಖಲಿಸಿದ್ದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಮಾತನಾಡಿ, ಕಟ್ಟು ಕಥೆಗಳನ್ನು ಆಧರಿಸಿ ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ತಾವು ಇದರಲ್ಲಿ ಆರೋಪ ಮುಕ್ತರಾಗಿ ಹೊರಬರುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟ್ ಆದೇಶದಂತೆ ಅವ್ಯವಹಾರದ ಬಗ್ಗೆ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಈ ಬಗ್ಗೆ ಇನ್ನೂ ಹೆಚಚ್ಿನ ತನಿಖೆ ಅಗತ್ಯವಿದೆ ಎಂದು ಪರಿಗಣಿಸಿ, ವಿಧಾನಸೌಧ ಪೊಲಿಸ್ ಠಾಣೆಯಲ್ಲಿ ಹಲವರ ವಿರುದ್ಧ ದೂರು ದಾಖಲಿಸಿದ್ದಾರೆ.

ವೆಬ್ದುನಿಯಾವನ್ನು ಓದಿ