ಮತ್ತೆ ಶುರುವಾಯ್ತು ರೆಸಾರ್ಟ್ ರಾಜಕೀಯ; ಕಾಂಗ್ರೆಸ್‌ನಿಂದ ಚಿಂತನ-ಮಂಥನ

ಭಾನುವಾರ, 6 ನವೆಂಬರ್ 2011 (11:18 IST)
ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಕಾಣಿಸತೊಡಗಿವೆ. ಪಕ್ಷದ ಹೈಕಮಾಂಡ್ ನಿರ್ದೆಶನದಂತೆ ರಾಜ್ಯ ಕಾಂಗ್ರೆಸ್ ಪಕ್ಷವು ಭಾನುವಾರ ರೆಸಾರ್ಟ್‌ನಲ್ಲಿ ಚಿಂತನ-ಮಂಥನ ಸಭೆ ನಡೆಸಲಿದೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ರಾಜ್ಯದ ಉಸ್ತುವಾರಿ ಹೊತ್ತುಕೊಂಡಿರುವ ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ಬಿಡದಿಯ ಈಗಲ್‌ಟನ್ ರೆಸಾರ್ಟ್‌‌ನಲ್ಲಿ ಸಭೆ ನಡೆಯುತ್ತಿದ್ದು, ಮುಂದಿನ ವಿಧಾನಸಭಾ ಚುನಾವಣೆ ಸಹಿತ ಹಲವು ವಿಷಗಳ ಬಗ್ಗೆ ನಾಯಕರು ಚರ್ಚೆ ನಡೆಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ, ಎಸ್. ಎಂ. ಕೃಷ್ಣ, ಕೆ. ಎಚ್. ಮುನಿಯಪ್ಪ, ಮೋಟಮ್ಮ, ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಸಹಿತ ಹಲವು ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಭಾನುವಾರ ಇಡೀ ದಿನ ಸಭೆ ನಡೆಯಲಿದ್ದು, ಪಕ್ಷದ ನಾಯಕರ ಮಧ್ಯೆ ತಲೆದೋರಿರುವ ವೈಷಮ್ಯವನ್ನು ಪರಿಹರಿಸಲು ಪ್ರಯತ್ನ ನಡೆಯಲಾಗುವುದು. ಅಲ್ಲದೆ ಬಳ್ಳಾರಿ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತು ಸಮಾಲೋಚನೆ ನಡೆಯಲಿದೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಪಕ್ಷದ ಹಿರಿಯ ಮುಖಂಡರು ಸಭೆ ಸೇರಲಿದ್ದಾರೆ.

ಈ ಹಿಂದೆ ಉಪಚುನಾವಣೆಯಲ್ಲಿ ಮುಖಭಂಗ ಎದುರಿಸಿದ್ದ ಹಿನ್ನಲೆಯಲ್ಲಿ ಯಾವ ರೀತಿ ಸಿದ್ಧತೆ ನಡೆಸಬೇಕು ಎಂಬುದರ ಬಗ್ಗೆಯೂ ಚರ್ಚೆ ಸಾಗಲಿದೆ. ಕಾಂಗ್ರೆಸ್ ಒಬ್ಬರ ನಾಯಕರ ಎದುರು ಮತ್ತೊಬ್ಬರು ಬಹಿರಂಗ ಹೇಳಿಕೆ ನೀಡುತ್ತಿರುವ ಹಿನ್ನಲೆಯಲ್ಲಿ ಆಂತರಿಕ ಭಿನ್ನಮತವನ್ನು ಶಮನ ಮಾಡುವತ್ತ ಗಮನ ಹರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಪಕ್ಷದ ಸಂಘಟನೆ ಹಾಗೂ ರಾಜ್ಯದ ರಾಜಕೀಯ ಬದಲಾವಣೆ ಹಿನ್ನಲೆಯಲ್ಲಿ ಪಕ್ಷವನ್ನು ಹೇಗೆ ಮುನ್ನಡೆಸಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಯಲಿದೆ. ಇಡೀ ದಿನ ನಡೆಯಲಿರುವ ಚರ್ಚೆಯು ಭಾರಿ ಮಹತ್ವ ಪಡೆದುಕೊಂಡಿದ್ದು, ಕಾಂಗ್ರೆಸ್‌ಗೆ ಹೆಚ್ಚಿನ ಚೈತನ್ಯ ತುಂಬುವ ಸಾಧ್ಯತೆಯಿದೆ.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

ವೆಬ್ದುನಿಯಾವನ್ನು ಓದಿ