ಗದ್ದುಗೆ ಗುದ್ದಾಟ; ಗಡ್ಕರಿ ಆಹ್ವಾನ ತಿರಸ್ಕರಿಸಿದ ಯಡಿಯೂರಪ್ಪ

ಸೋಮವಾರ, 19 ಮಾರ್ಚ್ 2012 (11:50 IST)
WD
ಮತ್ತೆ ತಮಗೆ ಮುಖ್ಯಮಂತ್ರಿ ಪಟ್ಟ ನೀಡಬೇಕೆಂದು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿಯವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನಾಗಪುರಕ್ಕೆ ಬರಲು ನೀಡಿರುವ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

ಸೋಮವಾರ ಮಧ್ಯಾಹ್ನ 3ಗಂಟೆಗೆ ನಾಗಾಪುರದಲ್ಲಿ ನಿಗದಿಯಾಗಿದ್ದ ಸಭೆಗೆ ಹಾಜರಾಗದಿರಲು ಯಡಿಯೂರಪ್ಪ ನಿರ್ಧರಿಸಿದ್ದಾರೆ. ಬಿಜೆಪಿ ಹೈಕಮಾಂಡ್ ನೀಡಿದ ಯಾವ ಆಶ್ವಾಸನೆಗೂ ಬಗ್ಗದ ಯಡಿಯೂರಪ್ಪ ಅವರು ಸಂಜೆಯೊಳಗೆ ನಿರ್ಧಾರ ತಿಳಿಸುವಂತೆ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನಿಸಿದೆ.

ಮತ್ತೊಂದೆಡೆ ಗೋಲ್ಡನ್ ಫಾಮ್ ರೆಸಾರ್ಟ್‌ನಲ್ಲಿ ಯಡಿಯೂರಪ್ಪ ಅವರು ತಮ್ಮ ಬೆಂಬಲಿಗರ ಜತೆ ದೀರ್ಘ ಸಮಾಲೋಚನೆ ನಡೆಸುತ್ತಿದ್ದು, ಮುಂದಿನ ರಣತಂತ್ರ ಹೆಣೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಹೈಕೋರ್ಟ್ ಬಿ.ಎಸ್.ಯಡಿಯೂರಪ್ಪ ಅವರನ್ನು ದೋಷಮುಕ್ತಗೊಳಿಸಿದೆ. ಹಾಗಾಗಿ ಬಿಜೆಪಿ ಹೈಕಮಾಂಡ್ ಕೊಟ್ಟ ಮಾತಿನಂತೆ,ಸದಾನಂದ ಗೌಡರನ್ನು ಸಿಎಂ ಗದ್ದುಗೆಯಿಂದ ಕೆಳಗಿಳಿಸಿ ಯಡಿಯೂರಪ್ಪನವರನ್ನು ಮತ್ತೆ ಮುಖ್ಯಮಂತ್ರಿ ಮಾಡಲಿ ಎಂದು ಆಪ್ತ ಶಾಸಕರು, ಸಚಿವರು ಬಿಗಿ ಪಟ್ಟು ಹಿಡಿಯುವ ಮೂಲಕ ಬಿಜೆಪಿಯೊಳಗೆ ಮತ್ತೊಮ್ಮೆ ಬಿಕ್ಕಟ್ಟು ಸೃಷ್ಟಿಯಾದಂತಾಗಿದೆ.

ವೆಬ್ದುನಿಯಾವನ್ನು ಓದಿ