ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಘೇರಾವ್

ಮಂಗಳವಾರ, 15 ಏಪ್ರಿಲ್ 2014 (11:13 IST)
PR
PR
ಮೈಸೂರು: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಘೇರಾವ್ ಹಾಕಿದ ಘಟನೆ ನಡೆದಿದೆ. ಸಿಎಂ ಆಪ್ತನೆಂದು ಹೇಳಲಾದ ಕುಮಾರ್ಎಂಬವನ ಅಸಭ್ಯ ವರ್ತನೆ ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ. ಕುಮಾರ್ ಗೋಪಾಲ್ ಎಂಬವರ ಮನೆಯ ಎದುರು ಮೂತ್ರವಿಸರ್ಜನೆ ಮಾಡಿದ್ದಕ್ಕೆ ಗೋಪಾಲ್ ಆಕ್ಷೇಪಿಸಿದಾಗ ಅವರ ಮೇಲೆ ಕುಮಾರ್ ಹಲ್ಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ.

ಅಲ್ಲದೇ ಗೋಪಾಲ್‌ಗೆ ಆಗಾಗ್ಗೆ ಕಿರುಕುಳ ನೀಡುತ್ತಿದ್ದನೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಕಾರಿಗೆ ಗೋಪಾಲ್ ಘೇರಾವ್ ಹಾಕಿದ ಬಳಿಕ ಕಾರಿನಿಂದ ಇಳಿದ ಸಿಎಂ ಸಿದ್ದರಾಮಯ್ಯ ಕುಮಾರ್ ತಪ್ಪುಮಾಡಿದ್ದರೆ ಶಿಕ್ಷೆ ವಿಧಿಸಿ ಜೈಲಿಗೆ ಕಳಿಸುವುದಾಗಿ ಭರವಸೆ ನೀಡಿದರು.

ವೆಬ್ದುನಿಯಾವನ್ನು ಓದಿ