ನಾಳೆ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ

ಬುಧವಾರ, 16 ಏಪ್ರಿಲ್ 2014 (13:55 IST)
PR
PR
ಬೆಂಗಳೂರು: ನಾಳೆ ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಮತದಾನಕ್ಕೆ ಸಕಲ ಸಿದ್ಧತೆ ಮಾಡಲಾಗಿದ್ದು, ರಾಜ್ಯದ ಎಲ್ಲಾ ಕೇಂದ್ರಗಳಲ್ಲೂ ವ್ಯಾಪಕ ಭದ್ರತೆ ಮಾಡಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶಾಂತಿಯುತ ಚುನಾವಣೆಗೆ ಎಲ್ಲೆಡೆ ವ್ಯವಸ್ಥೆ ಮಾಡಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬೂತ್ ಬಗ್ಗೆ ಎಸ್‌ಎಂಎಸ್ ಮೂಲಕ ತಿಳಿಯಬಹುದು. ಶೇ. 99ರಷ್ಟು ಗುರುತಿನ ಚೀಟಿ ನೀಡಲಾಗಿದೆ. ಗುರುತಿನ ಚೀಟಿ ಸಿಗದವರಿಗೂ ಮತದಾನಕ್ಕೆ ಅವಕಾಶ ನೀಡಲಾಗುತ್ತದೆ.

PR
PR
ರೇಷನ್ ಕಾರ್ಡ್, ಪಾಸ್‌ಪೋರ್ಟ್, ಬ್ಯಾಂಕ್ ಪಾಸ್ ಪುಸ್ತಕ ತೋರಿಸಿ ಮತದಾನ ಮಾಡಬಹುದು ಎಂದು ಅನಿಲ್ ಕುಮಾರ್ ಝಾ ಹೇಳಿದ್ದಾರೆ.ಎಲ್ಲಾ ಖಾಸಗಿ, ಸರ್ಕಾರಿ ಸಂಸ್ಥೆಗಳಿಗೆ ಸಂಬಳ ಸಹಿತ ರಜೆ ಘೋಷಿಸಲಾಗಿದೆ ಎಂದು ಅನಿಲ್ ಕುಮಾರ್ ಹೇಳಿದ್ದಾರೆ.ಈ ಬಾರಿ 60,00 ಪೊಲೀಸ್ ಸಿಬ್ಬಂದಿ, 54, 264 ಮತಗಟ್ಟೆಗಳನ್ನು ಮತದಾನಕ್ಕಾಗಿ ನಿರ್ಮಿಸಲಾಗಿದೆ ಎಂದು ಅನಿಲ್ ಕುಮಾರ್ ಹೇಳಿದರು.

ವೆಬ್ದುನಿಯಾವನ್ನು ಓದಿ