ಘೋಷಣಾ ಪತ್ರಗಳಲ್ಲಿ ಸುಳ್ಳು ಮಾಹಿತಿ: ಅಭ್ಯರ್ಥಿಗಳ ವಿರುದ್ಧ ದೂರು

ಗುರುವಾರ, 17 ಏಪ್ರಿಲ್ 2014 (07:33 IST)
PR
ಕೇಂದ್ರ ಸಚಿವ ಎಂ. ವೀರಪ್ಪಮೊಯ್ಲಿ, ಆಧಾರ್ ಪ್ರಾಧಿಕಾರದ ಮಾಜಿ ಆಧ್ಯಕ್ಷ ನಂದನ್ ನೀಲೆಕಣಿ ಹಾಗೂ ಮಾಜಿ ಸಂಸದ ಸಿ. ನಾರಾಯಣ ಸ್ವಾಮಿ ಸೇರಿದಂತೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಹಲವು ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಘೋಷಣಾ ಪತ್ರಗಳಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಕರ್ನಾಟಕ ಕಾನೂನು ಸಂರಕ್ಷಣಾ ಸಮಿತಿ ಆರೋಪಿಸಿದೆ.

ಸಮಿತಿಯ ಉಪಾಧ್ಯಕ್ಷೆ ಪಾರ್ವತಿ ಹಾಗೂ ಪ್ರಧಾನ ಕಾರ್ಯದರ್ಶಿ ಮಾಕನಹಳ್ಳಿ ಗಿರೀಶ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಳ್ಳು ಮಾಹಿತಿ ನೀಡುವ ಮೂಲಕ ಚುನಾವಣಾ ಆಯೋಗ ಹಾಗೂ ರಾಜ್ಯದ ಜನತೆಯನ್ನು ವಂಚಿಸಿರುವ ರಾಜಕೀಯ ನಾಯಕರ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ತಿಳಿಸಿದರು. ಗ್ಯಾಸ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವೀರಪ್ಪಮೊಯ್ಲಿ ವಿರುದ್ಧ ದೆಹಲಿಯಲ್ಲಿ ದೂರು ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ಸಿದ್ಧಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ