ಸಚಿನ್ ನಂ. 1 ಸ್ಥಾನ ಕಸಿದುಕೊಂಡ ಲಂಕಾ ನಾಯಕ ಸಂಗಾ

ಮಂಗಳವಾರ, 30 ನವೆಂಬರ್ 2010 (09:51 IST)
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಿಂದಿಕ್ಕಿರುವ ಶ್ರೀಲಂಕಾ ನಾಯಕ ಕುಮಾರ ಸಂಗಕ್ಕರ ನೂತನವಾಗಿ ಬಿಡುಗಡೆಗೊಂಡಿರುವ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಟೆಸ್ಟ್ ಬ್ಯಾಟಿಂಗ್ ರ‌್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನೇರಿದ್ದಾರೆ.

ವೆಸ್ಟ್‌ಇಂಡೀಸ್ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಸಂಗಕ್ಕರ 150 ರನ್ ಗಳಿಸಿರುವುದು ಪ್ರಗತಿಗೆ ಕಾರಣವಾಗಿದೆ. ಅದೇ ಹೊತ್ತಿಗೆ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಸಚಿನ್ ಬ್ಯಾಟಿಂಗ್ ವೈಫಲ್ಯ ಕಂಡಿದ್ದರು.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಅಗ್ರಸ್ಥಾನದಲ್ಲಿರುವ ಸಂಗಾ 882 ಅಂಕ ಹೊಂದಿದ್ದಾರೆ. ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿರುವ ಸಚಿನ್ 859 ಪಾಂಯಿಂಟ್ ಹೊಂದಿದ್ದು, 23 ಅಂಕಗಳ ಹಿನ್ನೆಡೆ ಅನುಭವಿಸುತ್ತಿದ್ದಾರೆ.

ಇದೇ ಪಟ್ಟಿಯಲ್ಲಿ 850 ಅಂಕಗಳೊಂದಿಗೆ ಭಾರತದ ವೀರೇಂದ್ರ ಸೆಹ್ವಾಗ್ ಮೂರನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಜಾಕ್ವಾಸ್ ಕಾಲಿಸ್ ಮತ್ತು ಅಬ್ರಹಾಂ ಡಿ ವಿಲಿಯರ್ಸ್ ಕ್ರಮವಾಗಿ ನಾಲ್ಕು ಹಾಗೂ ಐದನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಜಹೀರ್ ನೆಗೆತ...
ಮತ್ತೊಂದೆಡೆ ಬೌಲಿಂಗ್ ಪಟ್ಟಿಯಲ್ಲಿ ಅಮೋಘ ರ‌್ಯಾಂಕಿಂಗ್ ಏರಿಕೆ ಕಂಡಿರುವ ಎಡಗೈ ವೇಗಿ ಜಹೀರ್ ಖಾನ್ ಜೀವನಶ್ರೇಷ್ಠ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್‌ನಲ್ಲಿ ಜಹೀರ್ 90 ರನ್ ತೆತ್ತು ನಾಲ್ಕು ವಿಕೆಟ್ ಕಬಳಿಸಿದ್ದರು.

ವೆಬ್ದುನಿಯಾವನ್ನು ಓದಿ